ಪುತ್ತೂರು :ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ಶ್ರೀ ಪ್ರಕಾಶ್ ನಕ್ಷತ್ರಿತ್ತಾಯ ಇವರ ನೇತೃತ್ವದಲ್ಲಿ ಮಲರಾಯ ಮತ್ತು ಮಲರಾಯ ಬಂಟ ಮಹಿಶಾಂತಾಯ ದೈವಗಳ ನೇಮೋತ್ಸವವು ಡಿ. 18ರಂದು ಸಂಪ್ರದಾಯಬದ್ಧವಾಗಿ ನಡೆಯಿತು.
ಈ ಪ್ರಯುಕ್ತ ಬೆಳಿಗ್ಗೆಯಿಂದಲೇ ಕಾರ್ಯಕ್ರಮಗಳು ಆರಂಭವಾಗಿದ್ದು ಬೆಳಿಗ್ಗೆ ಗಣಹೋಮ, ನಾಗತಂಬಿಲ, ಹರಿಸೇವೆ, ಧರ್ಮದೈವಗಳ ಕಲಶಾಭಿಷೇಕ ಮತ್ತು ತಂಬಿಲ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6 ಕ್ಕೆ ದೈವಗಳ ಭಂಡಾರ ಇಳಿಯುವುದು, ರಾತ್ರಿ 8.30ರಿಂದ ಅನ್ನಸಂತರ್ಪಣೆ, 9ರಿಂದ ಕಳಲ್ತಾ ಗುಳಿಗ ನೇಮೋತ್ಸವ, ಮಲರಾಯ ಮತ್ತು ಮಲರಾಯ ಬಂಟ ಮಹಿಶಾಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ ಹಾಗೂ ಇತರೆ ದೈವಗಳಿಗೆ ತಂಬಿಲ ಸೇವೆ ನಡೆಯಿತು.ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀ ಕೆ ಸಂಜೀವ ಪೂಜಾರಿ ಕೂರೇಲು ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಜತೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾದರು.