ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಭವ್ಯವಾದ ಬಂಗಲೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ನಡೆದಿದೆ.
ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್ನಲ್ಲಿ ಐಟಿ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ.