ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೇರೆ ಬೇರೆ ಕಾರಣಗಳಿಂದ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಚಿಕ್ಕ ಮೂಡ್ನೂರು ಗ್ರಾಮ ಹಿರಿಯ ಕಾಂಗ್ರೆಸ್ ಮುಖಂಡರುಗಳಾದ ಇಸ್ಮಾಯಿಲ್ ಸಾಲ್ಮರ ಹಾಗೂ ದಿವಾಕರ ರೈ ಕಡಿಲಿಮಾರ್ ಅವರನ್ನು ಭೇಟಿ ಮಾಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಗೊಳ್ಳಲು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಬ್ಲಾಕ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಕೋವಿಡ್ ಸೇವಕ್ ಸಿಮ್ರಾನ್ ನಝೀರ್ ಉಪಸ್ಥಿತರಿದ್ದರು.