ನೆಲ್ಯಾಡಿ: ಧರ್ಮಸ್ಥಳದ -ಇಚ್ಲಂಪಾಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಸಮೀಪ ರಸ್ತೆ ಬದಿಯ ಹಳ್ಳಕ್ಕೆ ಕಾರೊಂದು ಬಿದ್ದಿದ್ದು, ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡಿರುವ ಘಟನೆ ಜು.5 ರಂದು ನಡೆದಿದೆ.
ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭಿಸಿದೆ. ಧರ್ಮಸ್ಥಳ ದಿಂದ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದ ಮಹಿಂದ್ರ ಕೆಯುವಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ.
ಗಾಯಾಳುಗಳನ್ನು ಎಸ್.ಡಿ.ಪಿ.ಐ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.