ಕಡಬ :ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ
ಸ್ಥಿತಿಯಲ್ಲಿ ಮೃತದೇಹವೊಂದು ಶನಿವಾರ ರಾತ್ರಿ ಕಂಡುಬಂದಿದೆ.
ಕಡಬ ಸಮೀಪದ ಗೋಳಿಯಡ್ಕ ನಿವಾಸಿಯೋರ್ವರು ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ
ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು ಎನ್ನಲಾಗಿದೆ.
ಸಂಜೆ ವೇಳೆಗೆ ಪರಿಸರದ ವಾಸಿಗಳಿಗೆ ವಾಸ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆತಕ್ಷಣವೇ ಸ್ಥಳೀಯರು ಸೇರಿ ಬೆಂಕಿಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.