ಸುಬ್ರಹ್ಮಣ್ಯ: ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಈತ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆತನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂಧಿದೆ.