ಪ್ರಧಾನಿ ಮೋದಿ ಅವರು ಇಂದು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಮುಂದಿನ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ. 19,500 ಕೋಟಿ ರೂ. ಮೊತ್ತವನ್ನು ದೇಶದ 9.75 ಕೋಟಿ ರೈತ ಕುಟುಂಬಗಳಿಗೆ ತಲುಪಿಸಲಿದೆ. ಈ ವೇಳೆ ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದು, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ವಾರ್ಷಿಕ 6 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ 2ಸಾವಿರ ರೂ ಬಿಡುಗಡೆ ಮಾಡಲಾಗುತ್ತದೆ. ಈ ಮೊತ್ತ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಈವರೆಗೂ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 1.38 ಲಕ್ಷ ಕೋಟಿ ರೈತ ಕುಟುಂಬಗಳಿಗೆ ನೀಡಲಾಗಿದೆ. ಇಂದಿನ ಪಿಎಂ ಕಿಸಾನ್ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮಾರ್ ಭಾಗಿಯಾಗಲಿದ್ದಾರೆ.