ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಇಂದು ಮಧ್ಯಾಹ್ನ 3:30 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಈಗ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ಅಧಿಕೃತ ಎರಡು ವೆಬ್ಸೈಟ್ಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನೋಡಬಹುದಾಗಿದೆ.
ಈ ವರ್ಷ 99.09 ಪರ್ಸೆಂಟ್ ರಿಸಲ್ಟ್ ಈ ಬಾರಿ ಬಂದಿದೆ.. ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ.. ಓರ್ವ ಮಾತ್ರ ಬೇರೆಯವರಿಂದ ಪರೀಕ್ಷೆ ಬರೆಸಿದ್ದ ಹೀಗಾಗಿ ಅವನ ಫಲಿತಾಂಶ ತಡೆಹಿಡಿಯಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ಗಳಾದ http://kseeb.kar.nic.in ಅಥವಾ karresult.nic.in ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ಮಾಡಬಹುದು.
ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.
ಈ ವರ್ಷ 625 ಪೂರ್ಣ ಅಂಕಗಳನ್ನು 155 ಮಕ್ಕಳನ್ನು ಪಡೆದಿದ್ದಾರೆ. ಎ+ ಗ್ರೇಡ್ ಅನ್ನು 1,28,931 ವಿದ್ಯಾರ್ಥಿಗಳು ಪಡೆದಿದ್ದು, ಎ ಗ್ರೇಡ್ ಅನ್ನು 2,50,317 ವಿದ್ಯಾರ್ಥಿಗಳು ಪಡೆದಿದ್ದಾರೆ. ಬಿ ಗ್ರೇಡ್ ಅನ್ನು 2,87,684 ವಿದ್ಯಾರ್ಥಿಗಳು ಪಡೆದಿದ್ದಾರೆ. ಸಿ ಗ್ರೇಡ್ ಅನ್ನು 1,13,610 ವಿದ್ಯಾರ್ಥಿಗಳು ಆಗಿದ್ದಾರೆ. 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 622 ಅಂಕ ಪಡೆದಿರುವ ಇಬ್ಬರು ಹಾಗೂ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.