ಮಂಗಳೂರು: ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ವಿಧಿಸಿದ್ದು, ಈ ನಿಟ್ಟಿನಲ್ಲಿ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿಗೊಂಡು, ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ನಾಗರ ಪಂಚಮಿ ಹಬ್ಬದಂದು ಸಾರ್ವಜನಿಕರು ಒಟ್ಟಾಗಿ ಸೇರಿ ನಡೆಸಲ್ಪಡುವ ಸೇವೆಗಳನ್ನು ರದ್ದು ಪಡಿಸಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3)ರಲ್ಲಿ ಆದೇಶ ಹೊರಡಿಸಿದ್ದಾರೆ.
- ದೇವಾಲಯದ ಹೊರಾಂಗಣದಲ್ಲಿರುವ ನಾಗಬನ/ಹುತ್ತಕ್ಕೆ ಸಾಮೂಹಿಕವಾಗಿ ಗುಂಪು- ಗುಂಪಾಗಿ ಪೂಜೆ ಸಲ್ಲಿಸುವುದನ್ನು ನಿಷೇಧಿಸಲಾಗಿದೆ.
- ಒಳಾಂಗಣದಲ್ಲಿ ದರ್ಶನ ಮತ್ತು ವೈಯಕ್ತಿಕ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಮೂಹಿಕ ಸೇವೆಗಳಿಗೆ ಅವಕಾಶವಿಲ್ಲ.
- ಕೋವಿಡ್ ಸಮುಚಿತ ವರ್ತನೆಯೊಂದಿಗೆ ಸರಳವಾಗಿ ನಾಗರ ಪಂಚಮಿ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಣೆ ಮಾಡಬೇಕಾಗಿ ಆದೇಶಿದ್ದಾರೆ.