ಬೆಂಗಳೂರು: ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟ್ರಾಫಿಕ್ ಪೊಲೀಸರು ಬಳಸುತ್ತಿದ್ದ ಮಷಿನ್ ಗಳನ್ನು ಆಯಾ ಪೊಲೀಸ್ ಠಾಣೆಗಳಲ್ಲಿ ಸರಂಡರ್ ಮಾಡಲು ಸೂಚನೆ ನೀಡಿದ್ದಾರೆ.
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಪಿಡಿಎ ಮಷಿನ್ ಗಳನ್ನು ಬಳಸಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡುತ್ತಿದ್ದರು. ಪಿಡಿಎ ಮಷಿನ್ ಗಳನ್ನು ವಿರುದ್ಧ ಸಾರ್ವಜನಿಕರಿಂದ ದೂರು ಬರ್ತಿತ್ತು. ಫೈನ್ ಕಟ್ಟಿದ್ರೂ, ಮಷಿನ್ ಗಳು ಹಿಂದಿನ ದಾಖಲೆಯನ್ನೇ ತೋರಿಸುತ್ತಿದ್ದವು. ಈ ಸಂಬಂಧ ಮಾಹಿತಿ ಪಡೆದಿದ್ದ ಗೃಹ ಸಚಿವ ಆರಜ ಜ್ಞಾನೇಂದ್ರ ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಟ್ರಾಫಿಕ್ ಜಂಟಿ ಆಯುಕ್ತ ರವಿಕಾಂತೇಗೌಡ, ತಾತ್ಕಾಲಿಕವಾಗಿ ಪಿಡಿಎ ಮಷಿನ್ ಗಳ ಮೂಲಕ ಫೈನ್ ನಿಲ್ಲಿಸಲಾಗಿದ್ದು, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಡಿಜಿಟಲ್ ಕ್ಯಾಮೆರಾದಲ್ಲಿ ಸೆರೆಯಾಗಲಿದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಫೈನ್ ರೆಸಿಪ್ಟ್ ಮನೆಗೆ ಬರಲಿದೆ ಎಂದು ತಿಳಿಸಿದ್ದಾರೆ.
ಸಂಚಾರಿ ಪೊಲೀಸ್ ಅಧಿಕಾರಿಗಳು ಹೇಳುವುದೇನು?
ಆದರೆ ಈ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳು ಅಲ್ಲಗಳೆದಿದ್ದು, ಗೃಹಸಚಿವರಿಂದ ಯಾವುದೇ ಲಿಖಿತ ಆದೇಶ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರನ್ನು ನಿಲ್ಲಿಸಬೇಡಿ ಎಂದು ಗೃಹ ಸಚಿವರೇ ಹೇಳಿದ ಮೇಲೆ ದಂಡ ಯಾಕೆ ಎಂದು ಪ್ರಶ್ನೆ ಮಾಡುವಂತಾಗಿದೆ.
ಅದರಲ್ಲೂ ಸಾಮಾಜಿಕ ಜಾಲ ತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ನಾಂದಿ ಹಾಡಿದೆ. ವಾಸ್ತವದಲ್ಲಿ ಅರಗ ಜ್ಞಾನೇಂದ್ರ ಹೆಸರಿನಲ್ಲಿ ಈ ಸುದ್ದಿಯನ್ನು ಹುಟ್ಟು ಹಾಕಿದ್ದು ಯಾರು? ಇದರ ಹಿಂದಿರುವ ಉದ್ದೇಶ ಏನು? ಎಂಬುದು ಮಾತ್ರ ನಿಗೂಢ. ಈ ಕುರಿತು ಇದೀಗ ಗೃಹ ಸಚಿವರೇ ಸ್ಪಷ್ಟನೆ ನೀಡುವ ಅನಿವಾರ್ಯತೆ ಎದುರಾಗಿದೆ.