ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಜಿಲ್ಲೆ ನೇತೃತ್ವದಲ್ಲಿ ಜನ್ಮ ಫೌಂಡೇಶನ್ ಟ್ರಸ್ಟ್(ರಿ) ಪುತ್ತೂರು ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಹಾಗೂ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ‘ಶ್ರೀ ಕೃಷ್ಣ ವೇಷ ಸ್ಪರ್ಧೆ-2021’ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆಯು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.10 ರಂದು ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ರಾಮಚಂದ್ರ ಕಾಮತ್ ಕರ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸತೀಶ್, ಜನ್ಮ ಫೌಂಡೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಹರ್ಷಕುಮಾರ್ ರೈ ಮಾಡಾವು, ಬಜರಂಗದಳ ಸಂಚಾಲಕ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.
ಶ್ರೀಕೃಷ್ಣ ವೇಷದ ಭಾವ ಚಿತ್ರವನ್ನು ವಾಟ್ಸಪ್ ನಂಬರ್‌ಗೆ ಕಳುಹಿಸಿ:
ಸ್ಪರ್ಧೆಯಲ್ಲಿ ಭಾಗವಹಿಸುವವರು ಶ್ರೀ ಕೃಷ್ಣ ವೇಷ ಧರಿಸಿ ತಮ್ಮ ಭಾವ ಚಿತ್ರವನ್ನು ವಿಳಾಸದೊಂದಿಗೆ ಮೊಬೈಲ್ ಸಂಖ್ಯೆ: 72044002108 ಗೆ ಆ.25ರ ಒಳಗಾಗಿ ಕಳುಹಿಸಿ ಕೊಡಬೇಕು. ಜಿಲ್ಲಾ ಮಟ್ಟದ ಸ್ಪರ್ಧೆಯಾಗಿದ್ದು 2 ರಿಂದ 7 ವರ್ಷದ ಮಕ್ಕಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಎಡಿಟ್ ಮಾಡಿದ ಭಾವ ಚಿತ್ರವನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.