ಪುತ್ತೂರು: ಮಾಜಿ ತಾಲೂಕ್ ಪಂಚಾಯತ್ ಸದಸ್ಯೆ ಯಶೋಧಾ ಅವರ ಪತಿ ಕೃಷ್ಣಪ್ಪ ಗೌಡ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಆ.10 ರಂದು ನಡೆದಿದೆ.
ಇವರು ಮನೆಯ ಸಮೀಪದ ಮರದಲ್ಲಿ ದೀವಿ ಹಲಸು (ಜೀಗುಜ್ಜೆ) ಕೊಯ್ಯಲು ಕೊಕ್ಕೆ ಹಿಡಿದುಕೊಂಡು ಹೋಗುವಾಗ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ.
ವಿದ್ಯುತ್ ಶಾಕ್ ಹೊಡೆದ ಕೂಡಲೇ ಕೃಷ್ಣಪ್ಪರವರು ಸ್ಥಳದಲ್ಲೇ ಬಿದ್ದಿದ್ದಾರೆ. ಕೂಡಲೇ ಆದರ್ಶ ಆಸ್ಪತ್ರೆಗೆ ಕರೆತರಲಾಗಿದ್ದು ಆದರೆ ಆದಾಗಲೇ ಕೊನೆಯುಸಿರೆಳೆದಿದ್ದಾರೆ.
ಮೃತದೇಹದ ಪೋಸ್ಟ್ ಮಾರ್ಟಂ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ನಡೆಯಲಿದೆ.
ಇವರ ಪತ್ನಿ ಯಶೋಧ ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆಯಾಗಿದ್ದರು, ಪ್ರಸ್ತುತ ಬಿಜೆಪಿಯ ಮಹಿಳಾ ಮೋರ್ಚಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.