ಪುತ್ತೂರು: ಬಿಜೆಪಿ ಯುವ ಮೋರ್ಚಾ ಪುತ್ತೂರು ನಗರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ತಿಕ್ ಕುಲಾಲ್ ಹಾಗೂ ನೂತನ ಉಪಾಧ್ಯಕ್ಷರಾಗಿ ದಯರಾಜ್ ತೆಂಕಿಲ ಆಯ್ಕೆಗೊಂಡಿದ್ದಾರೆ.
ಬಿಜೆಪಿ ಯುವ ಮೋರ್ಚಾ ಪುತ್ತೂರು ನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪುತ್ತೂರು ನಗರ ಮಂಡಲದ ಅಧ್ಯಕ್ಷರಾದ ಜಗನ್ನಿವಾಸ ರಾವ್ ಹಾಗೂ ಯುವ ಮೋರ್ಚಾದ ಅಧ್ಯಕ್ಷರಾದ ಸಚಿನ್ ಶೆಣೈ ನೇತೃತ್ವದಲ್ಲಿ ನೂತನ ಜವಾಬ್ದಾರಿ ಘೋಷಣೆ ಮಾಡಲಾಯಿತು.