ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕುಗಳು ಹೆಚ್ಚದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ತಿದೆ. ಈ ಮಧ್ಯೆ ಮುಂಬರುವ ಗಣೇಶ ಚತುರ್ಥಿ, ಮೊಹರಂ ಇತರೆ ಹಬ್ಬಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ.
ಗೌರಿ-ಗಣೇಶ ಹಬ್ಬಕ್ಕೆ ಮಾರ್ಗಸೂಚಿ..
- ಮನೆಗಳಲ್ಲಿ ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿಗಳನ್ನ ಕೂರಿಸುವಂತಿಲ್ಲ
- ಸಾರ್ವಜನಿಕ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಗಣೇಶ ಕೂರಿಸುವಂತಿಲ್ಲ
- ಚಪ್ಪರ/ ಪೆಂಡಾಲ್/ ಶಾಮಿಯಾನ ವೇದಿಕೆಗಳಲ್ಲಿ ಗಣೇಶ ಕೂರಿಸುವಂತಿಲ್ಲ
- ಗಣೇಶ ಮೂರ್ತಿಗಳನ್ನ ತರುವಾಗ/ ವಿಸರ್ಜಿಸುವಾಗ ಮೆರವಣಿಗೆಗೆ ನಿಷೇಧ
- ಸರ್ಕಾರ ನಿಗದಿಪಡಿಸಿದ ಹೊಂಡ, ಕಲ್ಯಾಣಿ & ಮೊಬೈಲ್ ಟ್ಯಾಂಕ್ಗಳಲ್ಲಿ ಗಣೇಶ ವಿಸರ್ಜನೆಗೆ ಅವಕಾಶ
- ದೇವಸ್ಥಾನಗಳಿಗೆ ಬರುವ ಭಕ್ತಾಧಿಗಳಿಗೆ ಸ್ಯಾನಿಟೈಸ್ & ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
- ಭಕ್ತಾಧಿಗಳಿಗೆ ಮಾಸ್ಕ್, 6 ಅಡಿ ಸಾಮಾಜಿಕ ಅಂತರ ಕಡ್ಡಾಯ.
ಮೊಹರಂ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ ರಿಲೀಸ್…:
- ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.
- ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆ ನಿಷೇಧ.
- ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು.
- ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು.
- ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ.
- ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
- ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸತಕ್ಕದ್ದು.
- 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು.
- ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ.
- ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು.
- ಕೋವಿಡ್ 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
- ಆಗಾಗ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು.
- ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು.
- ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಬೇಕು.
- ಆಡಳಿತ ಮಂಡಳಿ, ಆಡಳಿತಾಧಿಕಾರಿ, ಭಕ್ತಾಧಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು.
- ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಮಾನನ್ನು (ಜಾಯನಮಾಜ್) ಕಾಯವಾಗಿ ತರಬೇಕು.
- ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು.
- ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ನಿಷೇಧ.
- ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳಿಗಿಲ್ಲ ಅನುಮತಿ.
- ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು/ಯಾವ ಯಾವ ಕೆಲಸವನ್ನು.
- ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.