ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಮಿತಿ ಸಭೆಯು ಅಧ್ಯಕ್ಷರಾದ ಶುಭೋದಯ ಆಳ್ವ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನುಸೇರಿಸಿ ಪಂಚಾಯತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿರ್ಣಯ ಕೈಗೊಳ್ಳಲಾಯಿತು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಘಟಕದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ ಚಿಲ್ಮೆತ್ತಾರು, ಪಂಚಾಯತ್ ರಾಜ್ ಬ್ಲಾಕ್ ಅಧ್ಯಕ್ಷ ಸನತ್ ರೈ ಏಳ್ನಾಡುಗುತ್ತು ಭಾಗವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜಾ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ, ಸೇವಾದಳದ ಟ್ರೈನರ್ ವಿಶ್ವನಾಥ್, ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿಯನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.