ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥ ತಡೆದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಬಂಧಿಸುವಂತೆ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಆಗ್ರಹಿಸಿದೆ.
ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ 48 ಗಂಟೆಗಳ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ 500 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ‘ಕಬಕ ಚಲೋ’ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದೆ.