ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.
ಬಂಧಿತರನ್ನು ಅಜೀದ್, ಉಮ್ಮರ್, ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಪೊಲೀಸರು ಮೂವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಕಾರ್ಯರ್ತರು ತಡೆ ಒಡ್ಡಿದ ಘಟನೆ ಇಂದು ಸಂಭವಿಸಿದ್ದು. ಈ ಘಟನೆ ಕುರಿತಾಗಿ ಜಿಲ್ಲೆಯಾದ್ಯಂತ ವ್ಯಾಪಕ ಚರ್ಚೆಯಾಗಿದ್ದು, ದೇಶಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನವಾಗುವ ರೀತಿ ವರ್ತಿಸಿದ ಕಾರ್ಯಕರ್ತರನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿದ್ದೂ, ಅದೇ ರೀತಿ ಶಾಸಕರೂ ಈ ಬಗ್ಗೆ ಧ್ವನಿ ಎತ್ತಿದ್ದು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಹೋರಾಟಗಾರರಿಗೆ ಅವಮಾನ ಮಾಡುವ ಕಾರ್ಯಕರ್ತರ ಈ ನಡೆ ಖಂಡನೀಯ ಅವರನ್ನು ಬಂಧಿಸಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.