ಪುತ್ತೂರು: ಮತೀಯ ಗಲಭೆಗೆ ಕುಮ್ಮಕ್ಕು ನೀಡುವ ಎಸ್.ಡಿ.ಪಿ.ಐ. ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಹಿಂದು ಮಹಾಸಭಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ನವೀನ್ ಕುಲಾಲ್ ಅವರು ಪುತ್ತೂರು ನಗರ ಠಾಣಾ ವೃತ್ತ ನಿರೀಕ್ಷಕ ಗೋಪಾಲ ನಾಯ್ಕರವರಿಗೆ ಮನವಿ ಸಲ್ಲಿಸಿದ್ದಾರೆ.
ಕಬಕದಲ್ಲಿ ಸ್ವಾತಂತ್ರ್ಯ ರಥದಲ್ಲಿದ್ದ ಸ್ವಾತಂತ್ರ್ಯ ವೀರ ಸಾವರ್ಕರ್ ಭಾವಚಿತ್ರ ತೆಗೆದು ಟಿಪ್ಪು ಸುಲ್ತಾನ್ ಭಾವಚಿತ್ರ ಅಳವಡಿಸಲು ಆಗ್ರಹಿಸಿ ದಾಂಧಲೆ ಎಬ್ಬಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಹಿಂದೂ ಮಹಾಸಭಾದ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಧನ್ಯಕುಮಾರ್ ಬೆಳಂದೂರು ಅವರು ಮನವಿ ನೀಡುವ ವೇಳೆ ಉಪಸ್ಥಿತರಿದ್ದರು.