ಪುತ್ತೂರು: ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ಕೋರಿದರು. ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು. ಸಹಶಿಕ್ಷಕಿ ಸ್ಮಿತಾ ರೈ ಸ್ವಾಗತಿಸಿ, ಸಹಶಿಕ್ಷಕಿ ಕೌಶಲ್ಯಾ ರಾಜ್ ಕಮಲ್ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ನಝೀರ್ ಅಹಮ್ಮದ್, ಶಿಕ್ಷಕೇತರ ವೃಂದದವರಾದ ಇಬ್ರಾಹಿಂ ಬಡಗನ್ನೂರ್ ಉಪಸ್ಥಿತರಿದ್ದರು.