ಪುತ್ತೂರು: ರೋಟರಿಪುರ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ನಗರ ಸಭಾ ಸದಸ್ಯೆ ರೋಹಿಣಿ ಕೇಶವ ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಗತಿ ಯುವಕ ಮಂಡಲದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಬಾಲ ವಿಕಾಸ ಅಧ್ಯಕ್ಷರು, ಆಶಾ ಕಾರ್ಯಕರ್ತೆ, ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.