ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಬ್ಯಾಂಕಿನ ನಿರ್ದೇಶಕರಾದ ಮಾಜಿ ಯೋಧ ಬಾಲಕೃಷ್ಣ ಪಿ. ಎಸ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್, ಉಪಾಧ್ಯಕ್ಷರಾದ ಮೋಹನ್ ಕೆ. ಎಸ್, ಆಡಳಿತ ಮಂಡಳಿ ಸದಸ್ಯರಾದ ಹರೀಶ್ ನಾಯಕ್ ಎಂ, ಕೃಷ್ಣ ಕೆ, ಉದಯ ಕುಮಾರ್ ಎ, ದಯಾನಂದ ಆಳ್ವ, ಗೋವರ್ಧನ್, ಸುಂದರ, ಶ್ರೀಮತಿ ಜಯಂತಿ. ಹೆಚ್ ರಾವ್, ಶ್ರೀಮತಿ ಶುಭಲಕ್ಷ್ಮಿ ಹಾಗೂ ಬ್ಯಾಂಕ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್. ಕೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಬ್ಯಾಂಕ್ ನ ಲೆಕ್ಕಾಧಿಕಾರಿ ಚಂದ್ರಹಾಸ ರಾಣ್ಯ ಡಿ ಕಾರ್ಯಕ್ರಮ ನಿರೂಪಿಸಿದರು.