ಪುತ್ತೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 2020-21 ನೇ ಸಾಲಿನ ಅಧ್ಯಕ್ಷರಾಗಿ ಡಾ. ರಾಜರಾಮ್ ಕೆ ಬಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್ ಪಡ್ಪು ಇವರು ಆಯ್ಕೆಯಾಗಿರುತ್ತಾರೆ.
ಯುವವಾಹಿನಿ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಚುನಾವಣಾ ಅಧಿಕಾರಿಯಾದ ಜಯಂತ ನಡುಬೈಲು ಚುನಾವಣಾ ಪ್ರಕ್ರಿಯೆ ನಡೆಸಿ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು, ಯುವವಾಹಿನಿಯ ನೂತನ ಗೌರವ ಸಲಹೆಗಾರರಾದ ಪದ್ಮರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಡಿ. 25ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಸಭಾಂಗಣದಲ್ಲಿ ನಡೆಯಿತು.