ಪುತ್ತೂರು: ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಈ ವರ್ಷ ವಿಶೇಷ ಅಭಿಯಾನ ನಡೆಸುತ್ತಿದ್ದು ಸುಮಾರು 25 ಕ್ಕಿಂತಲೂ ಹೆಚ್ಚು ಅಶ್ವತ ಗಿಡ ನೆಟ್ಟು ಅತೀ ಹೆಚ್ಚು ಆಮ್ಲಜನಕ ನೀಡುವ ಈ ಸಸಿಯನ್ನು ನೆಟ್ಟು ಸಂರಕ್ಷಣೆ ಮಾಡುವ ಸಂಕಲ್ಪ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇಂದು ನರಿಮೊಗರಿನ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಪುತ್ತಿಲ, ಬಾಲಕೃಷ್ಣ ಪೂಜಾರಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ನಾಯ್ಕ್, ಗೌರವಾಧ್ಯಕ್ಷ ಅರುಣ್ ಪುತ್ತಿಲ ಮತ್ತು ಸದಸ್ಯರು ಉಪಸ್ಥಿತರಿದ್ದರು.