ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮನೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಖಾತೆ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಆ. 23ರಂದು ಭೇಟಿ ನೀಡಿದರು. ತನ್ನದೇ ಹುಟ್ಟೂರಿಗೆ ಸಚಿವೆಯಾದ ಬಳಿಕ ಸಂಭ್ರಮದಿಂದ ಆಗಮಿಸಿರುವ ಇವರನ್ನು ಅದ್ಧೂರಿಯಾಗಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಲಾಯಿತು.
ಸಚಿವೆ ಶೋಭಾ ಕರಂದ್ಲಾಜೆ ಯವರಿಗೆ ರಕ್ಷಾ ಬಂಧನವನ್ನು ಕಟ್ಟುವ ಮೂಲಕ ರಕ್ಷಾ ಬಂಧನವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ, ಸಾಂದೀಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರು, ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಶ್ರೀಕಾಂತ್ ಆಚಾರ್ಯ, ಅರುಣ ಅನಿಲ್ ಕುಮಾರ್, ಬಾಲಕೃಷ್ಣ ಪೂಜಾರಿ, ಬಿಜೆಪಿ ವಾರ್ಡ್ ಅಧ್ಯಕ್ಷ ಶ್ರೀಧರ, ಕಾರ್ಯದರ್ಶಿ ಜನಾರ್ದನ ಕುರೆಮಜಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇಂದು ಹಲವು ಕಾರ್ಯಕ್ರಮಗಳಲ್ಲಿ ಸಚಿವೆ ಭಾಗಿಯಾಗಲಿದ್ದಾರೆ.