ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಆ.23 ರಂದು ಭೇಟಿ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಶಾಲು ಹೊದಿಸಿ ನಾರಾಯಣ ಗುರುಗಳ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಗುರುಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್ ಸಿ ನಾರಾಯಣ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಶಶಿಧರ್ ಕಿನ್ನಿಮಜಲು, ಸದಾನಂದ ಕುಂದಾರ್, ನಾಗೇಶ್ ಬಲ್ನಾಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

