ವಿಟ್ಲ: ಜಿಲ್ಲಾ ಪಂಚಾಯತ್ ಅನುದಾನದಿಂದ ಖರೀದಿಸಿದ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮವೂ ಪಡಿಬಾಗಿಲು ಶಾಲೆಯಲ್ಲಿ ಜರುಗಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿಯವರು ಸಭಾಧ್ಯಕ್ಷತೆ ವಹಿಸಿ ಶಾಲೆಗೆ ಶುಭ ಹಾರೈಸಿದರು.ಜಿ.ಪಂ.ನಿಕಟಪೂರ್ವ ಸದಸ್ಯರಾದ ಶ್ರೀಮತಿ ಜಯಶ್ರೀ ಕೊಡಂದೂರು ಪೀಠೋಪಕರಣಗಳನ್ನು ಶಾಲೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ L K.G ಮತ್ತುU.K.G ಮಕ್ಕಳ ಪೋಷಕರಿಗೆ ಪಠ್ಯಪುಸ್ತಕ ವಿತರಿಸಲಾಯಿತು.ಈ ಸಂದರ್ಭದಲ್ಲಿ ಕೇಪು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಘವ ಮಣಿಯಾಣಿ, ಸದಸ್ಯರಾದ ಜಗಜೀವನ್ ರಾಮ್, ಶ್ರೀಮತಿ ಮೋಹಿನಿ,ಮಾಜಿ ಸೈನಿಕರು ಹಾಗೂ ಶಾಲಾಹಿತೈಷಿ ಸೀತಾರಾಮ ಶೆಟ್ಟಿ ಕುಕ್ಕೆ ಬೆಟ್ಟು,ಶಾಲಾ ಹಿತಚಿಂತಕರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಎಸ್.ಡಿ.ಎಂ.ಸಿ.ಅಧ್ಯಕರಾದ ಬಾಲಕೃಷ್ಣ ಕಾರಂತ, ಉಪಾಧ್ಯಕ್ಷೆ ಶ್ರೀಮತಿ ರೇಖಾ, ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಗೌರವಾಧ್ಯಕ್ಷರಾದ ಲಿಂಗಪ್ಪ ಗೌಡ, ಕಾರ್ಯದರ್ಶಿ ಜಿನಚಂದ್ರ ಜೈನ್ ಹಾಗೂ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಕೃಷ್ಣ ಕಾರಂತರು ಸ್ವಾಗತಿಸಿದರು. ಮುಖ್ಯಶಿಕ್ಷಕಿ ಶ್ರೀಮತಿ ಶಶಿಕಲಾ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾಸಿರಿ ಶಿಕ್ಷಣ ಕೇಂದ್ರದ ಕಾರ್ಯದರ್ಶಿ ಜಿನಚಂದ್ರ ಜೈನ್ ಧನ್ಯವಾದ ಸಲ್ಲಿಸಿದರು. ಪ್ರೌಢಶಾಲಾ ಸಹಶಿಕ್ಷಕಿ ಶ್ರೀಮತಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.



