ಪುತ್ತೂರು: 36 ವರ್ಷಗಳ ಸುದೀರ್ಘ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ (68 ವ)ರವರು ಆ.24 ರಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ . ಅಲ್ಪಕಾಲದಿಂದ ಅನ್ಯಾರೋಗ್ಯಕ್ಕೆ ತುತ್ತಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಇವರು ಮಾಡಿದ ಅಮೋಘ ಸಾಧನೆ, ಅನುಪಮ ದುಡಿಮೆಯನ್ನು ಪರಿಗಣಿಸಿ 1994ರಲ್ಲಿ ಜಿಲ್ಲಾ, 2009 ರಲ್ಲಿ ರಾಜ್ಯ ಹಾಗೂ 2011ರಲ್ಲಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆಪಾತ್ರರಾಗಿದ್ದರು.
ಪುತ್ತೂರು ಲಯನ್ಸ್ ಕ್ಲಬ್ ಕಾರ್ಯದರ್ಶಿಯಾಗಿ, ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್’ನ ಸದಸ್ಯರಾಗಿ ಹಾಗೂ ಪ್ರಸ್ತುತ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಶಿವಪ್ರಸಾದ್, ಶರತ್, ಭರತ್ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.