ಪುತ್ತೂರು: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಇವರ ವತಿಯಿಂದ ತುರ್ತುಸೇವೆಗೆ ಶವದಹನ ಪೆಟ್ಟಿಗೆ ಮತ್ತು ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವೂ ಆ.25 ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿಧ್ಯಾ ಆರ್ ಗೌರಿ, ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ಮುರಳಿ ಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಐತಪ್ಪ ನಾಯ್ಕ್, ವರದರಾಜ್ ಬಜಾರ್ ಮಾಲಕ ವೆಂಕಟ್ರಮಣ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


