ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇದರ 14ನೇ ಶಾಖೆಯೂ ಪುತ್ತೂರಿನ ನೆಲ್ಲಿಕಟ್ಟೆಯ ‘ರೈ ಕಮರ್ಷಿಯಲ್ ಕಾಂಪ್ಲೆಕ್ಸ್’ ನಲ್ಲಿ ಆ.29 ರಂದು ನೂತನವಾಗಿ ಶುಭಾರಂಭಗೊಳ್ಳುತ್ತಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಸಂಜೀವ ಮಠಂದೂರು ನೆರವೆರಿಸಲಿದ್ದು, ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಭದ್ರತಾ ಕೊಠಡಿ ಉದ್ಘಾಟನೆಯನ್ನು ನಗರ ಸಭೆ ಅಧ್ಯಕ್ಷರಾದ ಜೀವಂಧರ್ ಜೈನ್ ರವರು ನೆರವೇರಿಸಲಿದ್ದಾರೆ.
ಗಣಕೀಕರಣದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರು ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಎಸ್.ಬಿ. ಜಯರಾಮ ರೈ ಯವರು ಪ್ರಥಮ ಠೇವಣಿ ಪತ್ರ ಬಿಡುಗಡೆಯನ್ನು ಮಾಡಲಿದ್ದಾರೆ. ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷರಾದ ರವೀಂದ್ರ ಕಂಬಳಿ ಯವರು ನೆರವೇರಿಸಲಿದ್ದಾರೆ.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಕಟ್ಟಡ ಮಾಲಕರಾದ ರೋಶನ್ ರೈ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.