ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ಯುವತಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.
ಉತ್ತರ ಪ್ರದೇಶ ಮೂಲದ ಯುವತಿ, ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ವೇಳೆ ಗ್ಯಾಂಗ್ ರೇಪ್ ನಡೆದಿದೆ.
ಹೊರ ವಲಯದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ಕಂಡು ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದೆ ಎಂದು ತಿಳಿದುಬಂದಿದೆ.