ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷರನ್ನಾಗಿ ನರಿಮೊಗರು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿದ್ದ ರವೀಂದ್ರ ರೈ ನೆಕ್ಕಿಲು ಇವರನ್ನು ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ರವರು ನೇಮಕಗೊಳಿಸಿ ಆದೇಶಿಸಿದ್ದಾರೆ.
ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ತಿಳಿದು ಬಂದಿದೆ.
ರವೀಂದ್ರ ರೈ ನೆಕ್ಕಿಲು 1ನೇ ವಾರ್ಡಿನ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಪ್ರದಾನ ಕಾರ್ಯದರ್ಶಿಯಾಗಿ ಹಾಗೂ ಅಧ್ಯಕ್ಷರಾಗಿ, ನರಿಮೊಗರು ಪೈ ಬ್ರೇಕರ್ಸ್ ಯುವಕ ವೃಂದದ ಅಧ್ಯಕ್ಷರಾಗಿ,ಫ್ರೆಂಡ್ಸ್ ಪುರುಷರಕಟ್ಟೆ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡವರಾಗಿರುತ್ತಾರೆ.