ವಿಟ್ಲ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ವತಿಯಿಂದ ಪರಿಸರ ಸಂರಕ್ಷಣೆಯ ಸಲುವಾಗಿ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2ನೇ ವಿಭಾಗದ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಪಂಚಾಯತ್ ಸದಸ್ಯ ಶ್ರೀಮತಿ ಜಯಂತಿ ಜನಾರ್ಧನ್, ಗೋಳ್ತಮಜಲು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲತಾ, ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ,ಸೇವಾ ಪ್ರತಿನಿಧಿ ಶ್ರೀಮತಿ ರೇವತಿ,ಝಾನ್ಸಿರಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.