ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಬಹಳಷ್ಟು ನಿಯಂತ್ರಣದಲ್ಲಿದೆ. ಈ ನಿಟ್ಟಿನಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಪಡಿಸುವ ಕುರಿತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಮಾಡಿದ್ದಾರೆ.
ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕೋವಿಡ್ ಪ್ರಕರಣವು ಬಹಳಷ್ಟು ನಿಯಂತ್ರಣದಲ್ಲಿದ್ದು, ದಿನೇ ದಿನೇ ಸೋಂಕಿತರು ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಆದುದರಿಂದ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳುವರೇ, ಅಲ್ಲದೆ ನಗರ ವ್ಯಾಪ್ತಿಯ ವರ್ತಕರ ಸಂಘದವರು ಕೂಡ ವೀಕೆಂಡ್ ಕರ್ಪ್ಯೂವನ್ನು ರದ್ದುಪಡಿಸುವಂತೆ ಕೋರಿರುತ್ತಾರೆ ಮತ್ತು ನಗರ ವ್ಯಾಪ್ತಿಯಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ ಇರುವ ಮಾರ್ಗಸೂಚಿಯಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ.
ನಗರಸಭಾ ವತಿಯಿಂದ ಕೂಡ ಕೋವಿಡ್ ನಿಯಂತ್ರಣದ ಬಗ್ಗೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಆದುದರಿಂದ ನಗರಸಭಾ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಮ್ಯವನ್ನು ರದ್ದುಪಡಿಸಬೇಕಾಗಿ ನಗರ ವಾಸಿಗಳ ಪರವಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಅಧ್ಯಕ್ಷರು ಮನವಿಯಲ್ಲಿ ತಿಳಿಸಿದ್ದಾರೆ.