ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ದಕ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ನಾಯಕ್ ಆರ್ಲಪದವು ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀಧರ ಪೂಜಾರಿ ಚಾಲೆಪಡ್ಪು ಯವರನ್ನು ನೇಮಕಗೊಳಿಸಿ ಜಿಲ್ಲಾ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರು ಆದೇಶ ಮಾಡಿದ್ದಾರೆ.
ಸಕ್ರಿಯ ಕಾರ್ಯಕರ್ತರಾಗಿರುವ ನಾರಾಯಣ ನಾಯಕ್ ರವರು ಪಾಣಾಜೆ ಗ್ರಾಮ ಪಂಚಾಯತ್ ನ ಸದಸ್ಯರಾಗಿದ್ದು, ಪ್ರಸ್ತುತ ಪಾಣಾಜೆ ವಲಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಸಿಕೊಂಡವರಾಗಿದ್ದಾರೆ.

ಶ್ರೀಧರ ಪೂಜಾರಿಯವರು ಕೊಳ್ತಿಗೆ ಯುವಕ ಮಂಡಲದ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೊಳ್ತಿಗೆ ಒಕ್ಕೂಟದ ಅಧ್ಯಕ್ಷರಾಗಿ,ಷಣ್ಮುಖ ದೇವಾ ಪ್ರೌಢ ಶಾಲೆ ಪೆರ್ಲಂಪಾಡಿ ಇದರ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಕೊಳ್ತಿಗೆ ವಲಯ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮತ್ತು ಕೊಳ್ತಿಗೆ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.