ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಕೆಲ ನಿರ್ಬಂಧಗಳನ್ನು ಹೇರಿ ಆದೇಶ ಹೊರಡಿಸಿರುತ್ತಾರೆ.
- ಮುಂದಿನ ಆದೇಶದವರೆಗೆ ಜಿಲ್ಲೆಯಲ್ಲಿ ರಾತ್ರಿ 9-ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
- ವಾರಾಂತ್ಯಾ ಕರ್ಫ್ಯೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ಜಾರಿಯಲ್ಲಿರುತ್ತದೆ.
- ಮದುವೆ ಸಮಾರಂಭಗಳನ್ನು ಸ್ಥಳೀಯಾಡಳಿತದ ಅನುಮತಿಯೊಂದಿಗೆ ಗರಿಷ್ಠ 50 ಜನರನ್ನು ಒಳಗೊಂಡು ನಡೆಸಬಹುದು ಎಂದು ಆದೇಶಿಸಿದ್ದಾರೆ.
ಇನ್ನೂ ಕೆಲ ನಿಬಂಧನೆಗಳು ಈ ಕೆಳಗಿನಂತಿವೆ..