ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ.

ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ವಾಹನ ಸವಾರ ಪೊಲೀಸ್ ವಾಹನವನ್ನು ಕಂಡು ಎಡಬದಿಗೆ ತಿರುಗಿಸಿದ್ದು, ಈ ಸಂದರ್ಭದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ.
ಸಣ್ಣಪುಟ್ಟ ಗಾಯಗೊಂಡ ವಾಹನ ಸವಾರರನ್ನು ತಕ್ಷಣವೇ ಪೊಲೀಸ್ ವಾಹನದಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು,ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಅನಾಹುತವಾಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಲಾಗಿದೆ.