ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ೫ ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ 7 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆ ಸಂದರ್ಭ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ ವಿಚಾರಣೆ ನಡೆಸಿ ಜಾಮೀನು ಮುಂಜೂರು ಮಾಡಿತ್ತು. ಅದಾದ ಬಳಿಕ ಉಳಿದ ನಾಲ್ವರು ಆರೋಪಿಗಳಾದ ನೌಶಾದ್, ಮಹಮ್ಮದ್ ಹಾರಿಸ್, ಮಹಮ್ಮದ್ ತೌಸೀಪ್, ಸಂಶುದ್ದಿನ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ೫ ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.