ವಿಟ್ಲ: ಕೇಪು ಗ್ರಾಮ ಮಟ್ಟದ ‘ಪೋಷಣ್ ಅಭಿಯಾನ ಮಾಸಾಚರಣೆ ಗ್ರಾಮ ಮಟ್ಟದ ಪೌಷ್ಟಿಕ ಆಹಾರ ಸಪ್ತಾಹ’ವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಜಗಜೀವನ್ ರಾಮ್ ಶೆಟ್ಟಿಯವರು ವಹಿಸಿದರು. ಮುಖ್ಯ ಅತಿಥಿಯಾಗಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಭಾರತಿ ಕೊಡಂದೂರು ರವರ ಪ್ರಾರ್ಥನೆಯೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ಗಿಡನೆಡುವ ಕಾರ್ಯಕ್ರಮ ಹಾಗೂ ಪೋಷಣ್ ಅಭಿಯಾನದ ರ‍್ಯಾಲಿ ನಡೆಸಲಾಯಿತು. ಕಿರಿಯ ಆರೋಗ್ಯ ಕಾರ್ಯಕರ್ತೆ ಪೌಷ್ಟಿಕ ಆಹಾರ ಸಪ್ತಾಹ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಪುರುಷೋತ್ತಮ ಕಲ್ಲಂಗಳ, ಮೇಲ್ವಿಚಾರಕಿ ಸೋಮಕ್ಕ, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಆಶಾಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಲೋಚನಾ ಸ್ವಾಗತಿಸಿ, ನಿರೂಪಣೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಅನಸೂಯ ಧನ್ಯವಾದ ಸಮರ್ಪಿಸಿದರು.
