ಪುತ್ತೂರು: ರಾಯಚೂರು ಮೂಲದ ಹಿಂದೂ ಯುವಕರು ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರು ಮೂಲದ ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವತಿಯನ್ನು ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಭೇಟಿಯಾಗಿದ್ದು, ಈ ಬಗ್ಗೆ ತಿಳಿದ ಅನ್ಯಕೋಮಿನ ಯುವಕರು ಹಿಂದೂ ಯುವಕರನ್ನೂ ತರಾಟೆಗೆ ತೆಗೆದುಕೊಂಡು ಹಲ್ಲೆ ನಡೆಸಲು ಮುಂದಾದ ಘಟನೆ ಸೆ.1ರಂದು ಪುತ್ತೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹಿಂದೂಸ್ತಾನ್ ಲಾಡ್ಜ್ ನ ವ್ಯವಸ್ಥಾಪಕರು, Zoom.intv ಸಹಿತ ಕೆಲವು ವೆಬ್ ನ್ಯೂಸ್ ಹಾಗೂ ಚಾನೆಲ್ ಗಳ ವಿರುದ್ಧ ಲಾಡ್ಜ್ ಹೆಸರು ಕೆಡಿಸುವ ಪ್ರಯತ್ನ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ.
ಹಿಂದೂಸ್ತಾನ್ ಲಾಡ್ಜ್ ನ ಹೆಸರನ್ನು ಹಾಕಿ, ಲಾಡ್ಜ್ ನ ಫೋಟೋ ಸಹಿತ ವರದಿ ಪ್ರಕಟಿಸಿದ್ದು ಇದು ನಮ್ಮ ಸಂಸ್ಥೆಯ ಹೆಸರನ್ನು ಹಾಳು ಮಾಡುವ ಉದ್ದೇಶಕ್ಕೆ ಈ ರೀತಿಯ ಪ್ರಚಾರ ಮಾಡಲಾಗಿದೆ.
ಹಾಗಾಗಿ ನಮ್ಮ ಲಾಡ್ಜ್ ಬಗ್ಗೆ ಅಪಪ್ರಚಾರ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ದೂರಿನಲ್ಲಿ ತಿಳಿಸಲಾಗಿದೆ.
ಬಸ್ ನಿಲ್ದಾಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಬಸ್ ನಿಲ್ದಾಣದಲ್ಲಿ ಸುರಕ್ಷತೆಯ ಕೊರತೆ ಇರುವ ಸಮಯದಲ್ಲಿ ಅದನ್ನು ಸರಿ ಪಡಿಸಲು ಕಾನೂನು ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ನೀಡದ ಸಂಸ್ಥೆಗಳು ಕೇವಲ ಅವರ ಹೆಸರು ಬಂದ ತಕ್ಷಣ ಠಾಣೆಗೆ ದೂರು ನೀಡಿರುವುದು ಶೋಚನೀಯವಾಗಿದೆ. ಬಸ್ ನಿಲ್ದಾಣದಲ್ಲಿ ಸಾಕಷ್ಟು ಅನೈತಿಕ ಚಟುವಟಿಕೆಗಳು ನಡೆಯುವ ವಿಚಾರ ಎಲ್ಲರಿಗೂ ತಿಳಿದಿದೆ. ಅದರ ಬಗ್ಗೆ ಎಚ್ಚರ ವಹಿಸಬೇಕಾದುದು ಅನಿವಾರ್ಯವಾಗಿದೆ..


























