ಪುತ್ತೂರು: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕಿನ ವೀರಮಂಗಲದಲ್ಲಿ ಸೆ.2 ರಂದು ನಡೆದಿದೆ.
ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಕೋಳಿ ಅಂಕಕ್ಕೆ ಬಳಸುತ್ತಿದ್ದ ಎಂಟು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.