ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕುರಿತು ರಾಜ್ಯ ಸರಕಾರ ಇದೀಗ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
- ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಮನೆ ಹಾಗೂ ದೇವಸ್ಥಾನಗಳಲ್ಲಿ ಆಚರಿಸಬೇಕು.
- ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಹಾಗೂ ಮನೆಗಳಲ್ಲಿ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
- ಪಾರಂಪರಿಕ ಗಣೇಶೋತ್ಸವ ಮಂಡಳಗಳು 5 ದಿನಗಳಿಗಿಂತ ಹೆಚ್ಚು ಗಣೇಶೋತ್ಸವ ಆಚರಿಸುವಂತಿಲ್ಲ.
- 20 ಜನಕ್ಕಿಂತ ಹೆಚ್ಚು ಭಕ್ತರು ಸೇರುವಂತಿಲ್ಲ.
- ಗಣೇಶ ಆಚರಣೆ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಆಯೋಜಿಸಬೇಕು.
- ಆಯೋಜಕರು ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು.
- ಸಾರ್ವಜನಿಕರಿಗೆ, ನಾಗರಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು.
- ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ.
- ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವಾಗ ಯಾವುದೇ ರೀತಿಯ ಮೆರವಣಿಗೆಯನ್ನು ಮಾಡತಕ್ಕದ್ದಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಮಿಸಿರುವ ಹಾಗೂ ಪ್ರತ್ಯೇಕ ಟ್ಯಾಂಕ್ ಗಳಲ್ಲಿ ಗಣೇಶ ಮೂರ್ತಿ ವಿಸರ್ಜಿಸಬೇಕು.
- ಗಣೇಶ ಚತುರ್ಥಿ ಆಚರಿಸುವ ಸ್ಥಳದಲ್ಲಿ ಭಕ್ತರಿಗೆ ಹಾಗೂ ನಾಗರಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು.ಭಕ್ತರು 6 ಅಡಿ ಅಂತರದಲ್ಲಿ ನಿಂತು ದೇವರ ದರ್ಶನ ಮಾಡಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
- ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಿರಬೇಕು.
- ಕೊರೊನಾ ತಡೆ ಸಂಬಂಧ ವಿವಿಧ ಇಲಾಖೆಗಳು ಹೊರಡಿಸಿರುವ ಆದೇಶ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜನರು ಪಾಲಿಸಬೇಕು.
- ಗಣೇಶೋತ್ಸವ ಸಂದರ್ಭಕ್ಕೆ ಅನುಗುಣವಾಗಿ ಸಂಬಂಧಿಸಿ ಹೊರಡಿಸಿರುವ ಮಾರ್ಗಸೂಚಿ ಹಾಗೂ ಆದೇಶಗಳನ್ನು ಅನುಸರಿಸಬೇಕು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗಮನಹರಿಸಬೇಕು. ಸರಕಾರ ಹೊರಡಿಸುವ ನಿರ್ದೇಶನಗಳನ್ನು ಉಲ್ಲಂಘಿಸುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.