ಉಪ್ಪಿನಂಗಡಿ: ಜೀಪ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಜೀಪ್ ಪಲ್ಟಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಮಕುಂಜ ಸಮೀಪದ ಆತೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಆತೂರು ನಿವಾಸಿ ಇಸ್ಮಾಯಿಲ್ ಎಂಬವರು ಅಂಗಡಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಬರುತ್ತಿದ್ದ ಜೀಪ್ ಆಯಿಶಾ ಶಾಲೆಯ ಬಳಿ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ರಸ್ತೆಗೆಸೆಯಲ್ಪಟ್ಟ ಇಸ್ಮಾಯಿಲ್ ಹಾಗೂ ಜೀಪ್ ನಲ್ಲಿದ್ದ ಶಿಹಾಬ್ ಗೋಳಿತ್ತಡಿ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಉಪ್ಪಿನಂಗಡಿ ಪ್ರದೇಶದಲ್ಲಿ ಸಾಲು ಸಾಲು ಅಪಘಾತ ಸಂಭವಿಸಿದೆ.