ಉಪ್ಪಿನಂಗಡಿ: ಕಜೆಕ್ಕಾರ್ ನಿವಾಸಿ , ಉತ್ತಮ ಕ್ರೀಡಾಪಟು ಅಶೋಕ್ ಶೆಟ್ಟಿ ಕಜೆಕ್ಕಾರು (36) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.6ರಂದು ರಾತ್ರಿ ನಿಧನರಾದರು.
ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಇವರು ವೈಟ್ ಲಿಪ್ಟಿಂಗ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಕ್ರೀಡಾಪಟುವಾಗಿ ಹೆಸರು ಮಾಡಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಮೃತರು ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.


























