ಚಿತ್ರದುರ್ಗ: ದಿಢೀರ್ ಅಸ್ವಸ್ಥಗೊಂಡು ಇಲ್ಲಿನ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.
ರಕ್ತದಲ್ಲಿ ಸಕ್ಕರೆಯಂಶ ಕುಸಿತವಾದ ಕಾರಣ ಸದಾನಂದ ಗೌಡ ಅವರು ಅಸ್ವಸ್ಥರಾಗಿದರು. ಕೂಡಲೇ ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಹಾಸ್ಟರ್ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ.ಬಸವೇಶ್ವರ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸಹಜ ಸ್ಥಿತಿಗೆ ಬಂದಿದೆ. ಜ್ಯೂಸ್ ಕೂಡಾ ಕುಡಿದಿದ್ದಾರೆ. ಕುಟುಂಬದವರ ಜತೆಯೂ ಮಾತನಾಡಿದ್ದಾರೆ ಎಂದು ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಎಂ. ಚಂದ್ರಪ್ಪ ಮಾಹಿತಿ ನೀಡಿದ್ದಾರೆ.