ಪುತ್ತೂರು: ಕೋವಿಡ್ ನಿಯಮದಂತೆ ಗಣೇಶೋತ್ಸವ ಸರಳ ರೀತಿಯಲ್ಲಿ ಆಚರಣೆ ಮಾಡಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಕಡಿಮೆ ಆಗದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಗೋಪಾಲ್ ನಾಯ್ಕ್ ಅವರು ತಿಳಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ನಡೆದ ಗಣೇಶೋತ್ಸವ ಕುರಿತ ಶಾಂತಿ ಸಭೆಯಲ್ಲಿ ಅವರು ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಸುತೇಶ್ ಕೆ.ಪಿ ಗಣೇಶೋತ್ಸವ ಆಚರಣೆಯ ಮಾರ್ಗಸೂಚಿಗಳನ್ನು ತಿಳಿಸಿದರು. ವಿವಿಧ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ನಗರ ಠಾಣೆಯ ವಿನೋದ್ ಮತ್ತು ಜಗದೀಶ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.