ಬಂಟ್ವಾಳ: ತಾಲೂಕು ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಹಾಗೂ ಎನ್ ಆರ್ ಎಂ ಎಲ್ ವತಿಯಿಂದ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮ ನಡೆಯಿತು.

ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೌಷ್ಟಿಕಾಂಶ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಅಂಗನವಾಡಿಯ ಸುತ್ತಮುತ್ತ ಪೌಷ್ಟಿಕಾಂಶವುಳ್ಳ ತರಕಾರಿ ಬೀಜ ಹಾಗೂ ಗಿಡ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಉಪಕೇಂದ್ರ ವೀರಕಂಬ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ದನ ಪೂಜಾರಿ ಗೋಲಿಮಾರ್, ಗ್ರಾಮಾಭಿವೃದ್ಧಿ ಅಧಿಕಾರಿ ನಿಶಾಂತ್, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ಹರಿಣಾಕ್ಷಿ ,ಎಂ ಬಿ ಕೆ ಸವಿತಾ, ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಕುಸುಮ, ಆರೋಗ್ಯ ಸಹಾಯಕಿ ಶ್ರೀಮತಿ ಜ್ಯೋತಿ ಕೆ ಎನ್, ಆಶಾ ಕಾರ್ಯಕರ್ತರಾದ ಶ್ರೀಮತಿ ಲೀಲಾವತಿ, ಶ್ರೀಮತಿ ಕೋಮಲಾಕ್ಷಿ ,ಯುವ ಕೇಸರಿ ಫ್ರೆಂಡ್ಸ್ ಅಧ್ಯಕ್ಷ ಯತೀಶ್, ಅಂಗನವಾಡಿಗೆ ಶಿಕ್ಷಕಿ ಶ್ರೀಮತಿ ಮೀನಾಕ್ಷಿ, ಸಹಾಯಕಿ ಶ್ರೀಮತಿ ಮಮತಾ, ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

