ಪುತ್ತೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ವಾರಂಟ್ ಆಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಶಿವಪುರದ ಹಾಟ್ ಬಜಾರ್ ನಿಂದ ಸಂಪ್ಯ ಠಾಣಾ ಪೊಲೀಸರು ಸೆ.10 ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಶಿವಪುರ ಗ್ರಾಮದ ಮುಲೀನ್ ಸೊನಾಕ್ಕರ್ ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಂಪ್ಯ ಠಾಣಾ ಹೆಚ್.ಸಿ ಧರ್ಮಪಾಲ ಕೆ., ಪಿ.ಸಿ ಶಿವಾನಂದ ಕೆ., ಪಿ.ಸಿ. ಮುನಿಯ ನಾಯ್ಕ ಪಾಲ್ಗೊಂಡಿದ್ದರು.
ಆರೋಪಿಯ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಅಕ್ರ 117/07 ಕಲಂ: NDPS ACT ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.