ನೆಲ್ಯಾಡಿ: ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿದ ಘಟನೆ ಕಡಬ ತಾಲೂಕಿನ ಉದನೆಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಿಂದೂ ಬಾಂಧವರು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.
ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು ೧೯ ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ ನಡೆಸಿದ್ದರು.ನಿನ್ನೆ ಸರಳವಾಗಿ ಗಣಪತಿ ಮೂರ್ತಿಯ ವಿಸರ್ಜನೆಯನ್ನು ಮಾಡಿದ್ದರು,ಅಲ್ಲದೆ ರಾತ್ರಿ ೧೧ ರ ವರೆಗೂ ಸಮಿತಿಯ ತಂಡ ಗಣಪತಿ ಕಟ್ಟೆಯ ಬಳಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮುಂಜಾನೆ ಗಣಪತಿಯನ್ನು ಕುಳ್ಳಿಸಿರಿದ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಪುಡಿ ಮಾಡಿರುವ ವಿಚಾರ ಗಮನಕ್ಕೆ ಬಂದಿದ್ದು, ಭಕ್ತ ಸಮೂಹ ಆಕ್ರೋಶ ವ್ಯಕ್ತಪಡಿಸಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಸ್ಥಳದಲ್ಲಿ ಜನರು ಜಮಾಯಿಸಿದ್ದು, ಪೊಲೀಸರಿಗೂ ಮಾಹಿತಿ ರವಾನೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.