ಪಾಣಾಜೆ: ಆರ್ಲಪದವು ಭಜನಾ ಮಂದಿರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹಾಗೂ ಎಂ ಬಿ ವಿಶ್ವನಾಥ ರೈ ಯವರು ಭಾಗಿಯಾಗಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನೆರಿಮೊಗರು, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾ ಪ್ರದಾನ ಕಾರ್ಯದರ್ಶಿ ನಾರಾಯಣ ನಾಯ್ಕ್ ಆರ್ಲಪದವು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ, ವಲಯ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಭಟ್, ಸ್ಥಳೀಯ ಕಾಂಗ್ರೆಸ್ ಮುಖಂಡ ಜಗಜೀವನ್ ರೈ (ಪುಟ್ಟಣ್ಣ ), ಮಹಿಳಾ ಕಾಂಗ್ರೆಸ್ ನಾಯಕಿ ಶ್ರೀಮತಿ ಸೀತಾ ಭಟ್, ಕೇಪು,ಬಾಳಪ್ಪ ಪೂಜಾರಿ, ಕೃಷ್ಣಪ್ಪ ನಾಯ್ಕ್ ಅರ್ಧ ಮೂಲೆ,ಮೊದಲಾದವರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಾಬು ರೈ ಕೋಟೆ ಸ್ವಾಗತಿಸಿದರು.




























