ಮಂಗಳೂರು: ಐದು ದಶಕಗಳ ಕಾಂಗ್ರೆಸ್ಸಿಗ, 4 ದಶಕಗಳ ಸಂಸದ , 2 ಬಾರಿ ಕೇಂದ್ರ ಸಚಿವರಾಗಿ ದಾಖಲೆ ನಿರ್ಮಿಸಿದ್ದ ಹಾಗೂ ದೆಹಲಿ ಹಾಗೂ ಕರ್ನಾಟಕ ಕಾಂಗ್ರೆಸ್ ನ ಮಧ್ಯೆ ಕೊಂಡಿಯಂತೆ ಕೆಲಸ ಮಾಡುತ್ತಿದ್ದ ಆಸ್ಕರ್ ಫೆರ್ನಾಂಡೀಸ್ ಸೆ.13 ರಂದು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಮಂಗಳೂರಿನಿಂದ ಉಡುಪಿಗೆ ಕೊಂಡೊಯ್ಯಲಾಗಿದ್ದು, ಉಡುಪಿಯ ಚರ್ಚ್ ನಲ್ಲಿ ಪ್ರಾರ್ಥನೆ ಮಾಡಲಾಯಿತು. ಬೆಳಗ್ಗೆ 10.30ರಿಂದ 2.30ರ ವರೆಗೆ ಉಡುಪಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 3.30 ರ ನಂತರ ಮಂಗಳೂರಿನ ‘ಕಾಂಗ್ರೆಸ್’ ಕಚೇರಿಯಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕೂಡ ತೆರಳಿ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ರವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.



